ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಅಂಗವಾಗಿ ದೆಹಲಿಯ ಕೆಂಪು ಕೋಟೆ ಸಾಂಸ್ಕೃತಿಕ ಸಂಭ್ರಮಕ್ಕೆ ಸಾಕ್ಷಿಯಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಅದ್ಧೂರಿ ಆಚರಣೆ ಆರಂಭಗೊಂಡಿತು.

ಧ್ವಜಾರೋಹಣ ಬಳಿಕ ಭಾರತೀಯ ಸೇನೆಯಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ

ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಾಕ್ಷಿಯಾದ ಕೆಂಪು ಕೋಟೆಯ ನೋಟ.

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು.

ಕಲಾತಂಡಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ


ಕೆಂಪುಕೋಟೆ ಮುಂಭಾಗ ರೂಪುಗೊಂಡಿದ್ದ ಭಾರತದ ನಕ್ಷೆ

ಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಜ್ಘಾಟ್ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು.


ಎನ್ಸಿಸಿ ಕೆಡೆಟ್ಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

