ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇನ್ನೂ ನಾಲ್ಕು ದಿನ ಮಳೆ ಅಬ್ಬರ ಜೋರಾಗಿರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ನಾಳೆಯವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಳೆ ಹೆಚ್ಚಿರುವ ಕಾರಣ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಕೆರೆ, ಕೋಡಿಗಳು ತುಂಬಿ ರಸ್ತೆಗಳ ಮೇಲೆ ನೀರು ಬಂದಿದ್ದು, ಸಂಚಾರ ಸ್ಥಗಿತಗೊಂಡಿದೆ. ಅಫಜಲಪುರ ಹಾಗೂ ವಿಜಯಪುರ ಮಾರ್ಗದ ಸಂಪರ್ಕ ಕಡಿತವಾಗಿ ಜನ ಪರದಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮನೆಯೊಳಗೆ ನೀರು ನುಗ್ಗಿದ್ದು, ನಿವಾಸಿಗಳು ಹೈರಾಣಾಗಿದ್ದಾರೆ.