ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಂಗಳೂರಿನ ವಿಧಾನಸೌಧದ ಎದುರು ನಡೆದ ಡಾ.ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಅವರು ಗೌರವ ಸ್ವೀಕರಿಸಿದರು.
ಈ ವೇಳೆ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಮ್ಮ ಕುಟುಂಬಕ್ಕೆ ಆತ್ಮೀಯರು. ಅವರು ಮತ್ತು ಅವರು ಸರಕಾರ ಪುನೀತ್ ಅವರಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಹಾಗಾಗಿ ಎಲ್ಲರಿಗೂ ನಮ್ಮ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್ಕುಮಾರ್ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್, ಜ್ಯೂ.ಎನ್ಟಿಆರ್ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು.