ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ: ಡಿ.ಕೆ. ಶಿವಕುಮಾರ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದಲ್ಲಿಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ʼನಾ ನಾಯಕಿʼ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಹಣ ವಿತರಿಸಲಾಗುವುದು ಎಂದರು.

ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸಲಾಗುವುದು. ಅಲ್ಲದೇ ಮಹಿಳೆಯರಿಗೆ ಮೀಸಲಾತಿ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!