ಐತಿಹಾಸಿಕ ಮೈಲಿಗಲ್ಲು: ವಿಮಾನವಾಹಕ ನೌಕೆ INS ವಿಕ್ರಾಂತ್ ಡೆಕ್‌ನಲ್ಲಿ ಮೊದಲ ಜೆಟ್ ಲ್ಯಾಂಡಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತದ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ (INS Vikrant) ತನ್ನ ಫ್ಲೈಟ್ ಡೆಕ್‌ನಲ್ಲಿ ಫಿಕ್ಸ್ಡ್ ವಿಂಗ್ ವಿಮಾನವನ್ನು ಮೊದಲ ಬಾರಿಗೆ ಇಳಿಸುವುದರೊಂದಿಗೆ ಮೈಲಿಗಲ್ಲನ್ನು ಸಾಧಿಸಿದೆ.

ಭಾರತದ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ (LCA) ತೇಜಸ್‌ನ ನೌಕಾ ಆವೃತ್ತಿಯು ಸಮುದ್ರ ಪ್ರಯೋಗಗಳ ಭಾಗವಾಗಿ ಐಎನ್‌ಎಸ್ ವಿಕ್ರಾಂತ್‌ನಲ್ಲಿ ಯಶಸ್ವಿಯಾಗಿ ಇಳಿಯಿತು.

ಐಎನ್‌ಎಸ್ ವಿಕ್ರಾಂತ್ ಹಡಗಿನಲ್ಲಿ ಎಲ್‌ಸಿಎ (ನೌಕಾಪಡೆ) ಇಳಿಯುತ್ತಿದ್ದಂತೆ ಭಾರತೀಯ ನೌಕಾಪಡೆಯು, ಆತ್ಮ ನಿರ್ಭರ್ ಭಾರತ್ (ಸ್ವಾವಲಂಬಿ ಭಾರತ) (Aatma Nirbhar Bharat) ಕಡೆಗೆ ಸಾಧಿಸಿದ ಐತಿಹಾಸಿಕ ಮೈಲಿಗಲ್ಲು. ಇದು ಸ್ವದೇಶಿ ಫೈಟರ್ ಏರ್‌ಕ್ರಾಫ್ಟ್‌ನೊಂದಿಗೆ ಸ್ವದೇಶಿ ವಿಮಾನವಾಹಕ ನೌಕೆಯನ್ನು ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು, ನಿರ್ಮಿಸಲು ಮತ್ತು ನಿರ್ವಹಿಸಲು ಭಾರತದ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

45,000 ಟನ್ ತೂಕದ ಐಎನ್‌ಎಸ್ ವಿಕ್ರಾಂತ್ ₹ 20,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾರ್ಯಾರಂಭ ಮಾಡಿತ್ತು. 262 ಮೀಟರ್ ಉದ್ದ ಮತ್ತು 62 ಮೀಟರ್ ಅಗಲದ ಐಎನ್‌ಎಸ್ ವಿಕ್ರಾಂತ್ ಭಾರತದಲ್ಲಿ ನಿರ್ಮಿಸಲಾದ ಅತಿದೊಡ್ಡ ಯುದ್ಧ ನೌಕೆಯಾಗಿದೆ.ಇದು MiG-29K ಫೈಟರ್ ಜೆಟ್‌ಗಳು ಮತ್ತು ಹೆಲಿಕಾಪ್ಟರ್‌ಗಳು ಸೇರಿದಂತೆ 30 ವಿಮಾನಗಳನ್ನು ಸಾಗಿಸಬಲ್ಲದು. ಯುದ್ಧನೌಕೆಯು ಸುಮಾರು 1,600 ಸಿಬ್ಬಂದಿಗೆ ಅವಕಾಶ ಕಲ್ಪಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!