ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂಕೋರ್ಟ್ ನ ಐವರು ನ್ಯಾಯಾಧೀಶರನ್ನೊಳಗೊಂಡ ಪೀಠ ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಜಸ್ಟೀಸ್ ಎಸ್.ಕೆ.ಕೌಲ್ ಅವರನ್ನೊಳಗೊಂಡ ಪೀಠವು, ಕೌಟುಂಬಿಕ ನ್ಯಾಯಾಲಯಕ್ಕೆ ಒಪ್ಪಿಸದೇ ಪರಸ್ಪರ ಸಮ್ಮತಿ ದಂಪತಿ ಇನ್ನು ಮುಂದೆ ಆರು ತಿಂಗಳ ಕಾಲ ಕಾಯದೇ ವಿಚ್ಛೇದನ ಪಡೆಯಬಹುದಾಗಿದೆ ಎಂದು ಮಹತ್ವದ ತೀರ್ಪು ನೀಡಿದೆ.
ಈ ಬಗ್ಗೆ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ 2022ರ ಸೆಪ್ಟೆಂಬರ್ 29ರಂದು ಸುಪ್ರೀಂಕೋರ್ಟ್ ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು.
ವಿಚ್ಛೇದನಕ್ಕೆ ಸಂಬಂಧಿಸಿದಂತೆ ಕೌಟುಂಬಿಕ ನ್ಯಾಯಾಲಯ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ ಆರು ತಿಂಗಳ ಕಾಲಾವಕಾಶ ನೀಡುತ್ತಿತ್ತು. ಸಂವಿಧಾನದ 142ನೇ ವಿಧಿಯು ಬಾಕಿ ಇರುವ ವಿಚ್ಛೇದನ ಪ್ರಕರಣಗಳಲ್ಲಿ ಮದುವೆ ರದ್ದುಗೊಳಿಸುವ ಪರಮಾಧಿಕಾರವನ್ನು ಸುಪ್ರೀಂಕೋರ್ಟ್ ಗೆ ನೀಡುತ್ತದೆ.
