ಪಠ್ಯಪುಸ್ತಕ ಪರಿಷ್ಕರಣೆ: ಸಾರ್ವಕರ್, ಹೆಡ್ಗೇವಾರ್ ಪಠ್ಯಗಳಿಗೆ ಕೋಕ್ ಕೊಟ್ಟ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರಕಾರದ ಸಚಿವ ಸಂಪುಟ ಸಭೆ ಇಂದು ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಘೋಷಿಸಿದೆ.

ಮತಾಂತರ ನಿಷೇಧ ಕಾಯ್ದೆ, ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆ ರದ್ದುಗೊಳಿಸಲು ನಿರ್ಧರಿಸಲಾಗಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು,ರಾಜ್ಯದಲ್ಲಿ 6 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮಾತ್ರ ಬದಲಾವಣೆ ಮಾಡಲಾಗುತ್ತೆ. ಚಕ್ರವರ್ತಿ ಸೂಲೆಬೆಲೆ, ವೀರ್ ಸಾವರ್ಕರ್ ಪಠ್ಯವನ್ನು ತೆಗೆಯಲಾಗಿದೆ. ಇನ್ನು ಜವಾಹರ್ ಲಾಲ್ ನೆಹರೂ, ಡಾ. ಬಿಆರ್ ಅಂಬೇಡ್ಕರ್, ಸಾವಿತ್ರಿ ಭಾಯಿ ಪುಲೆ ಸೇರಿದಂತೆ ಕೆಲ ಪಠ್ಯಗಳನ್ನು ಸೇರ್ಪಡೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.

ಹಿಂದಿನ ಬಿಜೆಪಿ ಸರ್ಕಾರ ಮಾಡಿರುವ ತಪ್ಪುಗಳನ್ನು ಸರಿಪಡಿಸಲಾಗಿದೆ. ಮಕ್ಕಳಿಗೆ ಈಗಾಗಲೇ ಪಠ್ಯ ಪುಸ್ತಕ ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ವಾಪಸ್ ಪಡೆದರೆ ಮತ್ತೆ ಕೋಟ್ಯಾಂತರ ರೂಪಾಯಿ ವೆಚ್ಚವಾಗುತ್ತದೆ. ಹೀಗಾಗಿ ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ.ಇದರ ಜೊತೆಗೆ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನೋ ಮಾರ್ಗಸೂಚಿಯನ್ನು ಶಿಕ್ಷಕರಿಗೆ ನೀಡಲಾಗುತ್ತದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ ರದ್ದು
ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಳೆ ಎಪಿಎಂಸಿ ಕಾಯ್ದೆಯನ್ನು ಮರುಜಾರಿಗೊಳಿಸುವ ತೀರ್ಮಾನಕ್ಕೆ ಕಾಂಗ್ರೆಸ್ ಸರ್ಕಾರ ಬಂದಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಧಾನಸೌಧದಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್​ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ
ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಸಂಪುಟ ತೀರ್ಮಾನ ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ತೀರ್ಮಾನ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದ್ದು, ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲು ನಿರ್ಧರಿಸಲಾಗಿದೆ.

ಸಂವಿಧಾನ ಪೀಠಿಕೆ ಓದು ಕಡ್ಡಾಯ
ರಾಜ್ಯದ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ ಹಾಘೂ ಸರ್ಕಾರದ ಒಪ್ಪಿಗೆ ಪಡೆದು ಸ್ಥಾಪಿಸಲಾದ ಎಲ್ಲ ಖಾಸಗಿ ಶಾಲೆಗಳಲ್ಲಿಯೂ ಸಂವಿಧಾನ ಪೀಠಿಕೆ ಓದನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಈವರೆಗೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರತಿನಿತ್ಯ ಪ್ರಾರ್ಥನಾ ಸಮಯದಲ್ಲಿ ಹಾಗೂ ರಾಷ್ಟ್ರೀಯ ಹಬ್ಬಗಳಲ್ಲಿ ನಾಡಗೀತೆ, ರಾಷ್ಟ್ರಗೀತೆಗಳನ್ನು ಹಾಡಲಾಗುತ್ತಿತ್ತು. ಈಗ ಅದರೊಂದಿಗೆ ಭಾರತೀಯ ಸಂವಿಧಾನದ ಪೀಠಿಕೆ ಓದುವುದನ್ನು ಕೂಡ ಕಡ್ಡಾಯಗೊಳಿಸಲಿ ರಾಜ್ಯ ಸರ್ಕಾದರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!