ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಾಡಪ್ರಭು ಕೆಂಪೇಗೌಡ ಜಯಂತಿಯಂದು ಗಣ್ಯರು ಶುಭಾಶಯ ಕೋರಿದ್ದಾರೆ. ನಾಡಪ್ರಭು ಕೆಂಪೇಗೌಡರ ದಕ್ಷ, ದೂರದೃಷ್ಟಿಯ, ಜನಾನುರಾಗಿ ಆಡಳಿತ ನಮ್ಮೆಲ್ಲರಿಗೂ ಮಾದರಿಯಾದದ್ದು, ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ಜನ್ಮದಿನದಂದು ನಾಡಿನ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆಗಳನ್ನು ಹೆಮ್ಮೆಯಿಂದ ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. 100 ಕ್ಕೂ ಹೆಚ್ಚು ಕೆರೆಗಳನ್ನು ಹಾಗೂ 65 ಪೇಟೆಗಳನ್ನು ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರ ಆಡಳಿತದ ವೈಖರಿ ಇಂದಿಗೂ ನಮಗೆಲ್ಲಾ ಮಾದರಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
