ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಲಾಂಗ್ ವೀಕೆಂಡ್ ಸಿಕ್ಕಿದ್ದು, ಪ್ರವಾಸಿ ತಾಣಗಳಲ್ಲಿ ಜನರು ತುಂಬಿ ತುಳುಕುತ್ತಾರೆ. ಅಂತೆಯೇ ಮೈಸೂರಿಗೆ ಪ್ರವಾಸಕ್ಕೆ ಬರುವವರಿಗೆ ಚಾಮರಾಜೇಂದ್ರ ಮೃಗಾಲಯ ಪ್ರಮುಖ ಆಕರ್ಷಣೆಯಾಗಿದ್ದು, ಸ್ವತಂತ್ರ್ಯ ದಿನಾಚರಣೆಯ ದಿನವೂ ಕೆಲಸ ಮಾಡುವಂತೆ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.
ಆಗಸ್ಟ್ 15ರಂದು ಹೆಚ್ಚು ಮಂದಿ ಝೂಗೆ ಭೇಟಿ ನೀಡುವ ಸಾಧ್ಯತೆ ಇದೆ. ಹಾಗಾಗಿ ಮಂಗಳವಾರದ ರಜೆಯನ್ನು ರದ್ದು ಮಾಡಲಾಗಿದೆ. ಜೊತೆಗೆ ಕಾರಂಜಿಕೆರೆಯೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.
ಸಾಮಾನ್ಯವಾಗಿ ಮಂಗಳವಾರ ಚಾಮರಾಜೇಂದ್ರ ಮೃಗಾಲಯಕ್ಕೆ ರಜೆ ಇರುತ್ತದೆ. ಆದರೆ ಈ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಬಂದಿದ್ದು, ಸರ್ಕಾರಿ ರಜೆ ಇದೆ. ಈ ಕಾರಣಕ್ಕಾಗಿ ಮೃಗಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ಸಾಧ್ಯತೆ ಇದೆ.
