ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಸಂಸತ್ ಅಧಿವೇಶನ ಶುರುವಾಗಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಸೆಪ್ಟೆಂಬರ್ 18) ಸಂಜೆ 6: 30 ಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಿದ್ದಾರೆ.
ಸಂಪುಟ ಸಭೆಯಲ್ಲಿ 8 ಮಹತ್ವದ ಮಸೂದೆಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಕೇಂದ್ರ ಸಚಿವ ಸಂಪುಟದ ಎಲ್ಲಾ ಸಚಿವರು ಹಾಜರಿರಲಿದ್ದಾರೆ. ಇಂದಿನ ಸಭೆಯಲ್ಲಿ ವಿಶೇಷ ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳಬೇಕಾದ ಪ್ರಮುಖ ಮಸೂದೆಗಳ ಬಗ್ಗೆ ಚರ್ಚೆಗಳನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ.