ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳ ಪಟ್ಟಿ, ಆಹ್ವಾನ ಪತ್ರಿಕೆ ಬಿಡುಗಡೆ

ಹೊಸದಿಗಂತ ವರದಿ,ಮೈಸೂರು:

ರಾಜ್ಯದಲ್ಲಿ ಮಳೆಯಿಲ್ಲದೆ, ಬರಗಾಲ ಆವರಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ಆಚರಿಸುತ್ತೇವೆ ಎಂದು ಈಗಾಗಲೇ ಪ್ರಕಟಿಸಿದೆ. ಆದರೆ ಈ ಬಾರಿಯ ದಸರಾದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ಇರುತ್ತವೆ ಎಂಬ ಮಾಹಿತಿಯನ್ನು ನೀಡಿರಲಿಲ್ಲ. ಆದರೆ ಭಾನುವಾರ ದಸರಾದ ಕಾರ್ಯಕ್ರಮಗಳ ಪಟ್ಟಿಯ ವಿವರ ಹಾಗೂ ಅಧಿಕೃತ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವನ್ನೊಳಗೊoಡ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ, ಚಾಮುಂಡಿಬೆಟ್ಟ, ಅರಮನೆ, ಗಜಪಡೆಯ ಭಾವಚಿತ್ರವನ್ನೊಳಗೊಂಡ ಆಕರ್ಷಕ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ದಸರಾದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ
 ಮೈಸೂರಿನ ವಿವಿಧ ವೇದಿಕೆಗಳಲ್ಲಿ ವಿವಿಧ ದಸರಾ ಉಪ ಸಮಿತಿಗಳಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅರಮನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಕಲಾಮಂದಿರದಲ್ಲಿ ಚಲನಚಿತ್ರೋತ್ಸವ ಹಾಗೂ ಶಿಲ್ಪ ಚಿತ್ರಕಲೆ ಪ್ರದರ್ಶನ. ಜಗನ್ಮೋಹನ ಅರಮನೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಕುಪ್ಪಣ್ಣ ಪಾರ್ಕ್ನಲ್ಲಿ ಫಲ ಪುಷ್ಪ ಪ್ರದರ್ಶನ. ಈ ಬಾರಿ ಒಂದೇ ಕಡೆಗೆ ಆಹಾರ ಮೇಳ ಆಯೋಜನೆ ಮಾಡಲಾಗಿದೆ. ಹಾಗಾಗಿ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ. ದೊಡ್ಡಕೆರೆ ಮೈದಾನದಲ್ಲಿ ಕುಸ್ತಿ ಆಯೋಜಿಸಲಾಗಿದೆ. ವಸ್ತು ಪ್ರದರ್ಶನ ಆವರಣದಲ್ಲಿ ದಸರಾ ವಸ್ತು ಪ್ರದರ್ಶನ ನಡೆಯಲಿದೆ. ಮಾನಸಗಂಗೋತ್ರಿಯಲ್ಲಿರುವ
ಸೆನೆಟ್ ಭವನದಲ್ಲಿ ಯೋಗ ದಸರಾ ನಡೆಯಲಿದೆ.

ಸಯ್ಯಾಜಿರಾವ್ ರಸ್ತೆ ಸೇರಿದಂತೆ ವಿವಿಧ ರಸ್ತೆಗಳು ಹಾಗೂ ವೃತ್ತಗಳಲ್ಲಿ ವಿಶೇಷವಾಗಿ ದಸರಾ ದೀಪಾಲಂಕಾರ ಮಾಡಲಾಗುತ್ತಿದೆ.

ಆಹ್ವಾನ ಪತ್ರಿಕೆಯಲ್ಲಿದೆ ಸಿಎಂ ಸಿದ್ದರಾಮಯ್ಯನವರ ಸಂದೇಶ
ಸಮಸ್ತ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳು. ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬವನ್ನು ಅಕ್ಟೋಬರ್ ೧೫ ರಿಂದ ೨೪ರ ವರೆಗೆ ಆಚರಿಸಲಾಗುತ್ತಿದ್ದು, ಸರ್ವರಿಗೂ ಹೃತೂರ್ವಕ ಸ್ವಾಗತವನ್ನು ಬಯಸುತ್ತೇನೆ. ಕನ್ನಡ ನಾಡಿನ ಸಂಪ್ರದಾಯ, ಸಂಸ್ಕöÈತಿ, ಕಲಾ ವೈಭವವನ್ನು ಅನಾವರಣ ಮಾಡುವ ದಸರಾ ಹಬ್ಬ ಮನಸ್ಸಿಗೂ, ಕಣ್ಣಿಗೂ ಮುದ ನೀಡುವ ಜೊತೆಗೆ ದುಷ್ಟರ ಶಿಕ್ಷೆ ಶಿಷ್ಟರ ರಕ್ಷಣೆ ಎನ್ನುವ ಮೌಲ್ಯವನ್ನು ಸಾರುವ, ಕೆಡುಕನ್ನು ಅಳಿಸಿ, ಒಳತನ್ನು ಪಸರಿಸುವ ಆಧ್ಯಾತ್ಮಿಕ ಮಹತ್ವದ ಹಬ್ಬವಾಗಿದೆ.

ಮೈಸೂರು ದಸರಾ ಈ ಬಾರಿ ನಮ್ಮ ನಾಡಿಗೆ ಬರದ ಸ್ಥಿತಿ ಆವರಿಸಿದ್ದರೂ ವೈಭವ, ಸಂಭ್ರಮ ಮತ್ತು ಪಾರಂಪಾರಿಕ ಮೆರುಗಿಗೆ ಕೊರತೆಯಾಗದಂತೆ ಅವ್ಯಾಹತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು ನಾಡನ್ನು ಎಲ್ಲಾ ಕೆಡುಕುಗಳಿಂದ ರಕ್ಷಿಸಲಿ ಎಂದು ಪ್ರಾರ್ಥಿಸೋಣ. ಬನ್ನಿ, ನಾಡಹಬ್ಬ ದಸರೆಯ ಸಂಭ್ರಮವನ್ನು ಕಣ್ಣುಂಬಿಕೊಳ್ಳಿ, ಸವಿ ನೆನಪುಗಳನ್ನು ಮನದ ಭಿತ್ತಿಯಲ್ಲಿ ಅಚ್ಚಳಿಯದಂತೆ ದಾಖಲಿಸಿಕೊಳ್ಳಿ. ನಾಡಹಬ್ಬ ಮೈಸೂರು ದಸರಾ ೨೦೨೩ ಕ್ಕೆ ಸರ್ವರಿಗೂ ಸ್ವಾಗತ ಎಂದು ಕೋರಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವೇನು
ಸಮಸ್ತರಿಗೂ ನಾಡಹಬ್ಬ ದಸರಾ ಶುಭಾಶಯಗಳು. ಪಾರಂಪರಿಕ ನಗರಿ ಮೈಸೂರಿನಲ್ಲಿ ಪ್ರತಿವರ್ಷವೂ ನಮ್ಮ ನಾಡಿನ ಹೆಮ್ಮೆಯ ದಸರಾ ಹಬ್ಬವನ್ನು ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಅಸ್ಮಿತೆಯ ಪ್ರತೀಕ ನಾಡಹಬ್ಬ ದಸರಾವನ್ನು ಈ ವರ್ಷ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ. ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲಿರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!