ಕೇರಳದ ಸಾರಿಗೆ ಬಸ್‌ಗಳಿಗೆ ಇನ್ಮುಂದೆ ಸಿಸಿಟಿವಿ ಕ್ಯಾಮೆರಾ: ರಾಜ್ಯ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಇನ್ಮುಂದೆ ಎಲ್ಲಾ ಬಸ್‌ಗಳಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ಸಾರಿಗೆ ಸಚಿವ ಆಯಂಟನಿ ರಾಜು ಸೂಚಿಸಿದ್ದಾರೆ.

ಕೇರಳ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ಬಸ್‌ಗಳು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವುದನ್ನು ಅಕ್ಟೋಬರ್‌ 31ರೊಳಗೆ ಖಚಿತಪಡಿಸಿಕೊಳ್ಳಬೇಕೆಂದು ರಾಜ್ಯ ಸರ್ಕಾರವು ಆದೇಶಿಸಿದೆ.

ತಿ ಬಸ್‌ನ ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಕ್ಯಾಮೆರಾಗಳನ್ನು ಅಳವಡಿಸುವುದರಿಂದ ಬಸ್‌ನ ಒಳಗೆ ಮತ್ತು ಹೊರಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಸುಲಭವಾಗಿ ಹಾಗೂ ತ್ವರಿತವಾಗಿ ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಸಾವಿರಾರು ಬಸ್‌ಗಳಿಗೆ ಕ್ಯಾಮೆರಾಗಳನ್ನು ಖರೀದಿಸಲು ಸಮಯ ತೆಗೆದುಕೊಳ್ಳುವುದರಿಂದ ಈ ಉಪಕ್ರಮವನ್ನು ಅನುಷ್ಠಾನಗೊಳಿಸಲು ವಿಳಂಬವಾಗಿದೆ. ಆದರೆ, ಅಕ್ಟೋಬರ್‌ 31ರ ಗಡುವನ್ನು ವಿಸ್ತರಿಸುವುದಿಲ್ಲ. ಜೊತೆಗೆ ನವೆಂಬರ್‌ 1 ರಿಂದ ಸಾರಿಗೆ ಬಸ್‌ ಸೇರಿದಂತೆ ಭಾರಿ ವಾಹನಗಳ ಮುಂಭಾಗದ ಸೀಟಿನಲ್ಲಿ ಕುಳಿತುಕೊಳ್ಳುವ ಚಾಲಕರು ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಸೀಟ್‌ ಬೆಲ್ಟ್‌ ಧರಿಸಬೇಕು ಎಂದು ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!