ಹೊಸದಿಗಂತ ವರದಿ ಸಕಲೇಶಪುರ:
ದೇವಾಲದಕೆರೆ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ರವೀಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.
ತಾಲೂಕಿನ ದೇವಾಲದಕೆರೆ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭವ್ಯ ಹಾಗೂ ಕಮಲಮ್ಮ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮತದಾನ ಪ್ರಕ್ರಿಯೆಯಲ್ಲಿ ಭವ್ಯ ಅವರಿಗೆ 3 ಮತ ಹಾಗೂ ಕಮಲ ಅವರಿಗೆ 5 ಮತ ದೊರಕಿ ಕಮಲ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷ ಸ್ಥಾನಕ್ಕೆ ರವೀಂದ್ರ ಕುಮಾರ್ ಮತ್ತು ಅರವಿಂದ್ ಸ್ಪರ್ಧಿಸಿದ್ದು, ರವೀಂದ್ರ ಕುಮಾರ್ ಅವರಿಗೆ 5 ಮತ ಹಾಗೂ ಅರವಿಂದ್ ಅವರಿಗೆ 3 ಮತ ದೊರಕಿ ರವೀಂದ್ರ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ಅಧಿಕಾರಿಗಳಾಗಿ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಆದಿತ್ಯ ಅವರು ಕಾರ್ಯ ನಿರ್ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರು ಶುಭಾಶಯ ಕೋರಿದ್ದಾರೆ.