ಹೊಸದಿಗಂತ ಡಿಜಿಟಲ್ ಡೆಸ್ಕ್:
ನ.17 ರಂದು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ನ.17 ರಂದು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ.
ನಿಗದಿಯಂತೆ ಸಭೆ ನಡೆಯಲಿದ್ದು, ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಇಂದು ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದು, ನಳಿನ್ ಕುಮಾರ್ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು.