ಭೋವಿ ಸಮುದಾಯದ ಕುಟೀರ‌ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ವರದಿ ಬಾಗಲಕೋಟೆ:

ಭೋವಿ ಸಮುದಾಯದ ಗುರು ಕುಟೀರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿದರು.

ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿಗಳ ಸಂಸ್ಮರಣೋತ್ಸವದ ಅಂಗವಾಗಿ ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಭೋವಿ, ಕೊರಚ, ಕೊರಮ ಸೇರಿದಂತೆ ಹಲವು ಜನಸಮುದಾಯಗಳ ಸಮಾವೇಶದಲ್ಲಿ ಸಾಂಕೇತಿಕವಾಗಿ ಸುತ್ತಿಗೆ ಹಿಡಿದು ಕಲ್ಲು ಹೊಡೆಯುವ ಮೂಲಕ ಉದ್ಘಾಟಿಸಿದರು.

ಭೋವಿ ಗುರುಪೀಠದ ಶ್ರೀ ನಿರಂಜನ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೋವಿ ಸೇರಿದಂತೆ ಮುಂತಾದ ಸಮುದಾಯಗಳಿಗೆ ನೀಡಿರುವ ಅಪಾರ ಕೊಡಿಗೆಗಳನ್ನು ಪಟ್ಟಿ ಮಾಡಿ ಇಡೀ ಸಮುದಾಯದ ಪರವಾಗಿ ಧನ್ಯವಾದ ಅರ್ಪಿಸಿದರು.

ಶಾಸಕರಾದ ಮಾನಪ್ಪ ವಜ್ಜಲ್ ಸೇರಿದಂತೆ ಹಲವಾರು ಶಾಸಕರು, ಮಾಜಿ ಶಾಸಕರುಗಳು ಮತ್ತು ಭೋವಿ , ಕೊರಮ, ಕೊರಚ ಸಮುದಾಯಗಳ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳು ಗುರು ಕುಟೀರಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಠದಲ್ಲೇ ಪ್ರಸಾದ ಸೇವಿಸಿ ನಂತರ ವೇದಿಕೆಗೆ ಆಗಮಿಸಿ ಬೃಹತ್ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!