ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಡಿಸಿಎಂ ಡಿ.ಕೆ ಶಿವಕುಮಾರ್ ಗೆ ( DCM DK SHIVAKUMAR) ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿಶ್ವ ಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ದುಬೈಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅನುಮತಿ ನೀಡಿದೆ.
ಐಟಿ ಪ್ರಕರಣದಲ್ಲಿ ಆರೋಪಿಯಾಗಿರುವ ಡಿ.ಕೆ.ಶಿವಕುಮಾರ್ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಬೇಕಿದೆ. ಹೀಗಾಗಿ ನ.29ರಿಂದ ಡಿ.3ರವರೆಗೆ ತೆರಳಲು ಅನುಮತಿ ಕೋರಿದ ಅರ್ಜಿಯನ್ನು ವಿಚಾರಣೆ ನಡೆಸಿ ನ್ಯಾಯಾಧೀಶೆ ಜೆ.ಪ್ರೀತ್ ಅವರು ಅನುಮತಿ ನೀಡಿದ್ದಾರೆ.
ಐಟಿ ದಾಳಿ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಅವರ ಪಾಸ್ ಪೋರ್ಟ್ ಜಪ್ತಿ ಮಾಡಲಾಗಿತ್ತು. ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ ಪಡೆದು ತೆರಳುವಂತೆ ಷರತ್ತು ವಿಧಿಸಲಾಗಿತ್ತು.
