ಮಾದರಿ ನೀತಿ ಸಂಹಿತೆ ಉಲ್ಲಂಘನೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗೋವಾ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಆಮ್ ಆದ್ಮಿ ಪಕ್ಷದ ಸ್ಥಳೀಯ ಘಟಕವು ಸಮನ್ಸ್ ಸ್ವೀಕರಿಸಿದ್ದು, ದೆಹಲಿ ಮುಖ್ಯಮಂತ್ರಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯ ವಿವರಗಳ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಿರುವ ಒಂದು ದಿನ ಮೊದಲು ಅಂದರೆ ಮಂಗಳವಾರ ಸಮನ್ಸ್ ಸ್ವೀಕರಿಸಿದ್ದೇವೆ ಎಂದು ಎಎಪಿ ಗೋವಾ ಮುಖ್ಯಸ್ಥ ಅಮಿತ್ ಪಾಲೇಕರ್ ಅವರು ಹೇಳಿದ್ದಾರೆ. ಈ ಸಂಬಂಧ 2018 ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದಂತೆ ಕಾಣುತ್ತಿದ್ದು, ಆದರೆ ಪ್ರಕರಣದ ಬಗ್ಗೆ ಹೆಚ್ಚಿನ ವಿವರಗಳು ನಮಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!