ಹೊಸದಿಗಂತ ವರದಿ ಶಿವಮೊಗ್ಗ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣ ಕೊಡುವುದಕ್ಕೆ ಯಾರ ವಿರೋಧ ವೂ ಇರುವುದಿಲ್ಲ. ಆದರೆ ದೊಡ್ಡದಾಗಿ 10 ಸಾವಿರ ಕೋಟಿ ಕೊಡುತ್ತೇನೆ ಎಂದು ಬಿಂಬಿಸುವುದು ಶೋಭೆ ತರುವ ಸಂಗತಿ ಅಲ್ಲ. ಇದು ಹಿಂದೂ ಸಮಾಜದ ಆಕ್ರೋಶಕ್ಕೆ ಕಾರಣವಾಗಲಿದೆ. ಮುಖ್ಯಮಂತ್ರಿಗಳಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಎಲ್ಲಾ ಮಠಾದೀಶರು ಈ ಹೇಳಿಕೆಯನ್ನು ಖಂಡಿಸಿದ್ದಾರೆ ಎಂದರು.
ಉನ್ನತ ಹುದ್ದೆಯಲ್ಲಿ ಇರುವವರು ಏನೇ ಮಾತಾನಾಡಬೇಕಾದರೂ ಎಚ್ಚರಿಕೆ ವಹಿಸಬೇಕಾಗುತ್ತದೆ. ಓಲೈಕೆ ರಾಜಕಾರಣದ ಮೂಲಕ ಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂಬುದು ಕನಸಿನ ಮಾತು. ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.