ಕಾಂಗ್ರೆಸ್ ಶಾಸಕರಿಗೆ ಬಂಪರ್: 32 ಶಾಸಕರಿಗೆ ನಿಗಮ ಮಂಡಳಿ ಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣರಾಜ್ಯೋತ್ಸವದ ದಿನ ರಾಜ್ಯ ಸರ್ಕಾರದಿಂದ 32 ಶಾಸಕರನ್ನು ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಪ್ರಕಟವಾಗಿದೆ.

ಎಲ್ಲಾ ಶಾಸಕರುಗಳನ್ನು ಇಲ್ಲಿನ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನ ಮಾನದೊಂದಿಗೆ ಅಂದರೆ, ಸಚಿವರಿಗೆ ನೀಡಲಾಗುವ ಎಲ್ಲಾ ಸೌಲಭ್ಯದೊಂದಿಗೆ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಇದೇ ಮೊದಲ ಬಾರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ರಾಜಕೀಯ ಸಲಹೆಗಾರ ನೇಮಕವಾಗಿದ. ರಾಜ್ಯದಲ್ಲಿ ಉಪಮುಖ್ಯಮಂತ್ರಿಗೆ ರಾಜಕೀಯ ಸಲಹೆಗಾರ ನೇಮಕವಾಗಿರುವುದು ಇದೇ ಮೊದಲು.ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅವರನ್ನು ಡಿಸಿಎಂ ಡಿಕೆಶಿ ರಾಜಕೀಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

32 ಶಾಸಕರಿಗೆ ನೀಡಲಾಗಿರುವಂತ ನಿಗಮ ಮಂಡಳಿ ಸ್ಥಾನದ ಪಟ್ಟಿ

ಅಪ್ಪಾಜಿ ಸಿಎಸ್ ನಾಡಗೌಡ- ಕೆ ಎಸ್ ಡಿ ಎಲ್

ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ( ವಾಯುವ್ಯ ಸಾರಿಗೆ ನಿಗಮ)

ಹೆಚ್ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಹಂಪನಗೌಡ ಬಾದರ್ಲಿ – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಎಸ್ ಆರ್ ಶ್ರೀನಿವಾಸ್ – ಕೆ ಎಸ್ ಆರ್ ಟಿಸಿ

ಬಸವರಾಜ ನೀಲಪ್ಪ ಶಿವಣ್ಣನವರ್ – ಅರಣ್ಯ ಅಭಿವೃದ್ಧಿ ನಿಗಮ

ಬಿಜಿ ಗೋವಿಂದಪ್ಪ – ಆಹಾರ ಮತ್ತು ನಾಗರೀಕ ಸರಬರಾಜು ನಿಗಮ

ಜಿ ಎಸ್ ಪಾಟೀಲ್ – ಖನಿಜ ಮತ್ತು ಅಭಿವೃದ್ಧಿ ನಿಗಮ

ಶಿವಲಿಂಗೇಗೌಡ – ಕರ್ನಾಟಕ ಗೃಹಮಂಡಳಿ

ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ

ಹೆಚ್ ಸಿ ಬಾಲಕೃಷ್ಣ – ಕರ್ನಾಟರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಟಿಡಿ ರಾಜೇಗೌಡ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ

ಕನೀಜಾ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ

ಬಸವನಗೌಡ – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್

ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ

ಜಿ ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್ ಎನ್ ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!