ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಯಕ ಸಂಜು ಸ್ಯಾಮ್ಸನ್ ಹಾಗೂ ರಿಯಾನ್ ಪರಾಗ್ ಸ್ಫೋಟಕ ಅರ್ಧಶತಕಗಳ ಸಹಾಯದಿಂದ ಗುಜರಾತ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 196 ರನ್ಗಳ ಬೃಹತ್ ಮೊತ್ತ ಪೇರಿಸಿದೆ.
ಆರಂಭಿಕ ಆಟಗಾರರಾದ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಪವರ್ ಪ್ಲೇ ಮುಗಿಯುವ ಮುನ್ನವೇ ಡಗ್ಔಟ್ ಸೇರಿದ್ದಾಗ ರಾಜಸ್ಥಾನ ತಂಡ ಆಘಾತ ಕಂಡಿತ್ತು. ಈ ಹಂತದಲ್ಲಿ ಜೊತೆಯಾದ ಸಂಜು ಸ್ಯಾಮ್ಸನ್ ಹಾಗೂ ರಿಯಾನ್ ಪರಾಗ್ ಆಕರ್ಷಕ 130 ರನ್ಗಳ ಜೊತೆಯಾಟವಾಡುವ ಮೂಲಕ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.
ಪರಾಗ್ ಕೇವಲ 48 ಎಸೆತಗಳಲ್ಲಿ3 ಬೌಂಡರಿ, 5 ಸಿಕ್ಸರ್ ಇದ್ದ 76 ರನ್ ಚಚ್ಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ನಾಯಕ ಸಂಜು ಸ್ಯಾಮ್ಸನ್ 38 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಇದ್ದ ಅಜೇಯ 68 ರನ್ ಬಾರಿಸಿದರು.
ಇನ್ನಿಂಗ್ಸ್ನ ಕೊನೆಯಲ್ಲಿ ಶಿಮ್ರೋನ್ ಹೆಟ್ಮೆಯರ್ 5 ಎಸೆತಗಳಲ್ಲಿ ತಲಾ 1 ಬೌಂಡರಿ ಹಾಗೂ ಸಿಕ್ಸರ್ನೊಂದಿಗೆ 13 ರನ್ ಬಾರಿಸಿ ತಂಡದ ಮೊತ್ತ 190ರ ಗಡಿ ದಾಟುವಲ್ಲಿ ನೆರವಾದರು.
