ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲಿವುಡ್ ನಟರಾದ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಕುಬೇರ ಚಿತ್ರದ ಟೀಸರ್ ಮೇ 2 ರಂದು ಬಿಡುಗಡೆಯಾಗಲಿದೆ. ಈ ಮೂಲಕ ಚಿತ್ರದ ಮೊದಲ ಭಾಗವನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.
ಧನುಷ್ ಮೊದಲ ಬಾರಿಗೆ ಭಿಕ್ಷುಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪೋಸ್ಟರ್ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿದೆ. ಇದೀಗ ಕುಬೇರನ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಧನುಷ್ ಅವರ ಕೆಲವು ನಟನಾ ಕೌಶಲ್ಯವನ್ನು ಚಿತ್ರದಲ್ಲಿ ಕಾಣಬಹುದು.
ಧನುಷ್ ಮತ್ತು ರಶ್ಮಿಕಾ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಮಧ್ಯಮ ವರ್ಗದ ಕುಟುಂಬದ ಹುಡುಗಿಯ ಪಾತ್ರದಲ್ಲಿ ರಶ್ಮಿಕಾ ನಟಿಸಿದ್ದಾರೆ. ಚಿತ್ರದಲ್ಲಿ ಅವರ ಮುಖಭಾವವೂ ಸರಳವಾಗಿದೆ. ತೆಲುಗು ನಟ ಅಕ್ಕಿನೇನಿ ನಾಗಾರ್ಜುನ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
