ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ರೇವಣ್ಣ ಜೈಲಿಗೆ ಹೋಗ್ತಾರೋ ಇಲ್ಲವೋ ಎನ್ನೋದು ಇಂದು ಗೊತ್ತಾಗಲಿದೆ.
ದೌರ್ಜನ್ಯ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್ಐಟಿ (SIT) ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಆರೋಪಿ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅಂತ್ಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಬೇಲ್ ಸಿಗುತ್ತದೆಯೋ ಅಥವಾ ಇಲ್ಲವೋ ಕಾದುನೋಡಬೇಕಿದೆ.
