ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಸೈಟ್ ವಾಪಾಸ್ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ಮನೆಯಲ್ಲಿ ಯಜಮಾನರಿಗೆ ತೊಂದರೆ ಆಗುತ್ತಿದೆ ಎನ್ನವುದು ಅವರಿಗೆ ಗೊತ್ತಾಗಿದೆ. ಅದಕ್ಕಾಗಿ ವಾಪಸ್ ಮಾಡುತ್ತೇನೆ ಎಂದಿದ್ದಾರೆ. ಇದೊಂದು ಒಳ್ಳೆಯ ನಿರ್ಧಾರ ಅನಿಸುತ್ತದೆ ಎಂದು ಹೇಳಿದ್ದಾರೆ.
