ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಮಾಜಿ ಶಾಸಕ ಆರ್.ನಾರಾಯಣ ನಿಧನರಾಗಿದ್ದಾರೆ.
81 ವರ್ಷದ ಆರ್.ನಾರಾಯಣ ವಯೋಸಹಜ ಕಾಯಿಲೆಯಿಂದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಅವರು ಬೆಳ್ಳಾವಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ, ಮೂರು ಬಾರಿ ಶಾಸಕರಾಗಿದ್ದರು. ಹೌಸಿಂಗ್ ಬೋರ್ಡ್ ಚೇರ್ಮನ್ ಆಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 12 ಗಂಟೆಯಿಂದ ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ನಿಗದಿಪಡಿಸಲಾಗಿದೆ.