ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀರಾಮುಲು ಅವರು ಪಕ್ಷದ ಸಿದ್ದಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀರಾಮುಲು ಪಕ್ಷಕ್ಕೆ ಬರಲು ನನ್ನ ವಿರೋಧವಿಲ್ಲ. ಶ್ರೀರಾಮುಲು ಪಕ್ಷಕ್ಕೆ ಬರುತ್ತಾರೆ ಎನ್ನುವುದು ವದಂತಿ ಅಷ್ಟೇ ವಿರೋಧದ ಬಗ್ಗೆ ಮಾತನಾಡಿದರೆ ಹೈಕಮಾಂಡ್ ನೋಟಿಸ್ ನೀಡುತ್ತದೆ. ಆಗ ನಾನು ಉತ್ತರ ನೀಡಬೇಕಾಗುತ್ತದೆ ಎಂದರು.
ಡಿಕೆಶಿ ಶ್ರೀರಾಮುಲು ಅವರನ್ನು ಸಂಪರ್ಕ ಮಾಡಿದ್ದು ನನಗೆ ಗೊತ್ತಿಲ್ಲ. ನಾನು ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ನಾನು ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಸಿಎಂ ಮಾಡುವುದು ಬಿಡುವುದು ಹೈಕಮಾಂಡ್ ಜವಾಬ್ದಾರಿ ಎಂದು ಹೇಳಿದ್ದಾರೆ.
