ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.
ಈ ಕುರಿತು ಸಿಬಿಐ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಸ್ವೀಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖಾ ಸಂಸ್ಥೆಯಾಗಿದ್ದು, ಮೇಲ್ಮನವಿ ಸಲ್ಲಿಸುವ ಹಕ್ಕು ತನಗೆ ಮಾತ್ರ ಇದೆ ಎಂದು ಈ ಹಿಂದೆ ಹೇಳಿತ್ತು.
ಕಳೆದ ವರ್ಷ ಆಗಸ್ಟ್ 9 ರಂದು ಇಲ್ಲಿನ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಕ್ಕಾಗಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
