ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ‘ಮಾಸ್ಕ್ ಮ್ಯಾನ್’ನನ್ನು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕೋರ್ಟ್ಗೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ವಿಚಾರಣೆ ಅಗತ್ಯ ಇರುವ ಹಿನ್ನೆಲೆಯಲ್ಲಿ ಆತನನ್ನು ಎಸ್ ಐಟಿ ತಮ್ಮ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ಕಳೆದ ರಾತ್ರಿ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಇವುಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿ ತಮ್ಮ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.