ಬೆಂಗಳೂರಿನ ಮಾನ್ಯತಾ ಟೆಕ್‌ ಪಾರ್ಕ್‌ ಬಳಿಯ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಗವಾರದ ಮಾನ್ಯತಾ ಟೆಕ್‌ಪಾರ್ಕ್‌ ಬಳಿಯ ಖಾಸಗಿ ಶಾಲೆಯೊಂದಕ್ಕೆ ಬಾಂಬ್‌ ಬೆದರಿಕೆಯ ಇ–ಮೇಲ್‌ ಬಂದಿದ್ದು, ಇದರಿಂದ ಶಾಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ ಮೇಲೆ ಹುಸಿ ಬಾಂಬ್‌ ಬೆದರಿಕೆ ಸಂದೇಶ ಎಂಬುದು ತಿಳಿದುಬಂದಿತ್ತು. ಬಳಿಕಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟರು.

ಶಾಲಾ ಆಡಳಿತಾಧಿಕಾರಿ ಪದ್ಮಿನಿ ರಾಘವೇಂದ್ರ ಅವರು ನಿತ್ಯದಂತೆಯೇ ಗುರುವಾರ ಬೆಳಿಗ್ಗೆಯೂ ಶಾಲೆಗೆ ಬಂದಿದ್ದು, ಇ–ಮೇಲ್‌ ಪರಿಶೀಲಿಸುತ್ತಿದ್ದ ವೇಳೆ askblrnorth@tipsglobal.net ನಿಂದ ಬಾಂಬ್‌ ಬೆದರಿಕೆ ಇ–ಮೇಲ್‌ ಬಂದಿರುವುದು ತಿಳಿದುಬಂದಿದೆ.

ಶಾಲೆಯ ಸುತ್ತಲೂ ಐದು ಬಾಂಬ್‌ಗಳನ್ನು ಇಡಲಾಗಿದೆ. ಮಧ್ಯಾಹ್ನ 1.30ರ ಸುಮಾರಿಗೆ ಎಲ್ಲ ಬಾಂಬ್‌ಗಳು ಸ್ಫೋಟವಾಗಲಿವೆ ಎಂದು ಬರೆದಿರುವುದು ಕಂಡುಬಂದಿದೆ. ಇದನ್ನು ಓದಿ ಗಾಬರಿಗೊಂಡ ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!