ಕಲಬುರಗಿ: ಕಲಬುರಗಿಯಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೀದರ್ ವಲಯದ ಅರಣ್ಯಾಧಿಕಾರಿ ಬಸವರಾಜ ಡಾಂಗೆ ಹಾಗೂ ದೇವದುರ್ಗದ ಕೆ ಬಿ ಜೆ ಎನ್ ಎಲ್ ಇಇ ಯಾದ ತಿಪ್ಪಣ್ಣಾ ಅನ್ನದಾನಿ ಮನೆಗಳ ಮೇಲೆ ದಾಳಿ ನಡೆದಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಹತ್ವದ ದಾಖಲೆಗಳನ್ನು ಲೋಕಾ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.