ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಲೆಗಡುಕ ಎಂದ ಶಾಸಕ ಹರೀಶ್ ಪೂಂಜಾ ವಿರುದ್ಧ ತಡೆಯಾಜ್ಞೆ ತೆರವಾದರೆ ಕ್ರಮ ತೆಗೆದುಕೊಳ್ಳಬಹುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ೨೦೨೩ರಲ್ಲಿ ಶಾಸಕ ಹರೀಶ್ ಪೂಂಜಾ ನೀಡಿದ ಹೇಳಿಕೆ. ಅವರು ಈ ಸಂಬಂಧ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ತಡೆ ಆಜ್ಞೆ ತೆರವಾದರೆ ಕ್ರಮ ತೆಗೆದುಕೊಳ್ಳಬಹುದು ಎಂದು ಪರಮೇಶ್ವರ್ ಹೇಳಿದರು.