ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾಕ್ಕೆ ಸೋಲು: ಡೇಟಿಂಗ್ ಆಫರ್ ಕೊಟ್ಟ ಪಾಕ್ ನಟಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವಕಪ್ ನಲ್ಲಿ ನಲ್ಲಿ ಭಾರತವನ್ನು ಸೋಲಿಸಿದರೆ ಬಾಂಗ್ಲಾ ಕ್ರಿಕೆಟಿಗರಿಗೆ ಪಾಕಿಸ್ತಾನದ (Pakistan) ನಟಿ ಸೆಹರ್ ಶಿನ್ವಾರಿ (Sehar Shinwari) ಡೇಟಿಂಗ್ ಆಫರ್ ಕೊಟ್ಟಿದ್ದಳು. ಆದ್ರೆ ಇದೀಗ ಬಾಂಗ್ಲಾ ಹೀನಾಯ ಸೋಲುಕೊಂಡಿದ್ದು, ಈ ಕುರಿತು ನಟಿ ಪ್ರತಿಕ್ರಿಯಿಸಿದ್ದಾಳೆ.

ಬಾಂಗ್ಲಾ ಟೈಗರ್ಸ್ ಚೆನ್ನಾಗಿ ಆಡಿದ್ದೀರಿ. ಭಾರತದ ವಿರುದ್ಧ ಕನಿಷ್ಠ ಪಕ್ಷ ಅವರದ್ದೇ ನೆಲದಲ್ಲಿ ಒಳ್ಳೆಯ ಸವಾಲು ನೀಡಿದ್ದೀರಿ ಎಂದು ಹೊಗಳಿದ್ದಾಳೆ. ಶಿನ್ವಾರಿ ಟ್ವೀಟ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅಲ್ಲದೆ ಭಾರತೀಯ ಕ್ರೀಡಾಭಿಮಾನಿಗಳು ಪಾಕ್ ನಟಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಇನ್ ಶಾ ಅಲ್ಲಾ, ನನ್ನ ಬಾಂಗ್ಲಾ ಬಂಧು ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿ. ಆಗ ನಾನು ಢಾಕಾಗೆ ಭೇಟಿ ನೀಡಿ ಅಲ್ಲಿ ಬೆಂಗಾಲಿ ಹುಡುಗರೊಂದಿಗೆ ಡಿನ್ನರ್ ಡೇಟ್ ಮಾಡುವೆ ಎಂದು ಶಿನ್ವಾರಿ ಆಫರ್ ನೀಡಿದ್ದಳು. ಅಲ್ಲದೆ ಭಾರತ ತಂಡ ವಿಶ್ವಕಪ್‍ನಲ್ಲಿ (Worldcup 2023) ಸೆಮಿಫೈನಲ್‍ನಲ್ಲೇ ಹೊರಬೀಳಲಿದೆ ಎಂದು ಭವಿಷ್ಯ ನುಡಿದಿದ್ದಳು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!