ಹೊಸದಿಗಂತ ವರದಿ,ಮಂಡ್ಯ:
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದು ಎನ್ಡಿಎ ಬಲವರ್ಧನೆಗೆ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ದೇ ಹೋರಾಟ ನಡೆಸಲು ಎಂದು ಕೇಂದ್ರದ ಇಂಧನ ಮತ್ತು ಬೃಹತ್ ಕೈಗಾರಿಕಾ ಸಚಿವ ಕಿಶನ್ ಪಾಲ್ ಗುರ್ಜಾರ್ ಹೇಳಿದರು.
ನಗರದ ಬಿಜೆಪಿ ವಿಕಾಸ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶ ಪ್ರಧಾನ ಮಂತ್ರಿ ಮೋದಿ ಅವರ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವುದಾಗಿದೆ. ಈ ಯಾತ್ರೆಯಲ್ಲಿ ಮೋದಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮ, ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ. ಎರಡನೇ ಉದ್ದೇಶ ಮೋದಿ ಗ್ಯಾರಂಟಿಗಳನ್ನ ನೀಡುತ್ತಿದ್ದು ಇದರ ಬಗೆಗೂ ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಬಡವರನ್ನ ಸಮಾಜದ ಮುಖ್ಯ ವಾಹಿನಿಗೆ ತರೊ ನಿಟ್ಟಿನಲ್ಲಿ ಮೋದಿ ನೀಡುತ್ತಿರೋ ಗ್ಯಾರಂಟಿಗಳು ಪ್ರಮುಖ ಪಾತ್ರ ವಹಿಸಲಿವೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ, ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ, ಫೊಷಣ್ ಅಭಿಯಾನ್, ಉಜ್ವಲ್ ಯೋಜನೆ, ಆಯುಷ್ಮನ್ ಭಾರತ್, ಗರಿಬಿಕಲ್ಯಾಣ ಸೇರಿದಂತೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ ಎಂದರು.
