ಹೊಸದಿಗಂತ ಡಿಜಿಟಲ್ ಡೆಸ್ಕ್:
ಓಶಂಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕರ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ನಿಯಂತ್ರಣ ತಪ್ಪಿ ಓಶಂಕ್ತಿ ಮಾಲಾಧಾರಿಗಳಿಗೆ ಗುದ್ದಿದೆ. ಇದರಿಂದ ರಸ್ತೆ ದಾಟುತ್ತಿದ್ದ ಓಶಂಕ್ತಿ ಮಾಲಾಧಾರಿಯ ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯಲ್ಲಿ ಬೇಗೂರು ಗ್ರಾಮದ ಬಿಂದು ಮತ್ತು ರಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸೇರಿ ಮೂವರು ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
