ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಾಗಲಕೋಟೆ ಜಿಲ್ಲೆಯ ಬೀಳಗಿಯ ವಕೀಲ ಗಿರೀಶ್ ಕಾಡೆಣ್ಣವರ ಎಂಬವರು ಶವವಾಗಿ ಪತ್ತೆಯಾಗಿದ್ದಾರೆ.
ಮೃತದೇಹ ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿದ್ದು ಇದೊಂದು ಕೊಲೆ ಕೃತ್ಯ ಎಂದು ಶಂಕಿಸಲಾಗಿದೆ.
ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲರಾಗಿದ್ದ 38 ವರ್ಷ ಪ್ರಾಯದ ಗಿರೀಶ್, ಅ.15 ರಂದು ನಾಪತ್ತೆಯಾಗಿದ್ದರು. ಅವರಿಗಾಗಿ ಎಲ್ಲೆಡೆ ಹುಡುಕಾಟವನ್ನೂ ನಡೆಸಲಾಗಿತ್ತು. ಇದೀಗ ಗ್ರಾಮದ ವಾರಿಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಅವರ ಮೃತದೇಹ ಪತ್ತೆಯಾಗಿದ್ದು, ದೇಹ ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿದೆ.
ಬೀಳಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.