ಈರೋಡ್‌ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್‌ ಮುನ್ನಡೆ, ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಫೆಬ್ರವರಿ 27 ರಂದು ನಡೆದ ಈರೋಡ್ ಪೂರ್ವ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಹಾಲಿ ಕಾಂಗ್ರೆಸ್ ಶಾಸಕ ತಿರುಮಹನ್ ಎವೆರಾ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ಅನಿವಾರ್ಯವಾಗಿತ್ತು. ಇಂದಿನ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ ಮುನ್ನಡೆ ಸಾಧಿಸಿದ್ದು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಎರಡನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ 17,477 ಮತಗಳೊಂದಿಗೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಕೆ ಎಸ್ ತೆನ್ನರಸು (ಎಐಎಡಿಎಂಕೆ)ಗಿಂತ ಸುಮಾರು 11,800 ಮತಗಳ ಮುನ್ನಡೆ ಸಾಧಿಸಿದ್ದಾರೆ. ತೆನ್ನರಸು ಇದುವರೆಗೆ 5,621 ಮತಗಳನ್ನು ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!