ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಶಿವಮೂಗ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಎಂಟ್ರಿಯಾಗಿರುವುದು ರಾಜ್ಯದ ಗಮನ ಸೆಳೆದಿದೆ.
ಈ ಮಧ್ಯೆ, ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ಕುರಿತಾಗಿ ವಾಕ್ಸಮರ ಆರಂಭಗೊಂಡಿದ್ದು, ಈ ವಿಚಾರ ಇದೀಗ ಕೋರ್ಟ್ ಮೆಟ್ಟಿಲೇರಿದೆ. ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಚುನಾವಣಾ ಪ್ರಚಾರದ ವೇಳೆ ಈಶ್ವರಪ್ಪ ಅವರು ಮೋದಿ ಭಾವಚಿತ್ರ ಬಳಸಿರುವುದನ್ನು ಲೇವಡಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಈಶ್ವರಪ್ಪ ಅವರು ಮೋದಿ ಅವರಪ್ಪನ ಆಸ್ತಿಯಾ ಎಂದು ಉತ್ತರಿಸಿದ್ದರು. ಇದೀಗ ಮೋದಿ ಫೋಟೋಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
