ವಿಕಲಚೇತನ ಮಗಳ ಮೇಲೆ ಅತ್ಯಾಚಾರ: ತಂದೆಗೆ 107 ವರ್ಷ ಕಠಿಣ ಸಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಕಲಚೇತನಳಾದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿದ್ದು, ಇದೀಗ 107 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.

ಕೇರಳದ ಪೊಕ್ಸೋ ನ್ಯಾಯಾಲಯ 107  ವರ್ಷಗಳ ಕಠಿಣ ಜೈಲುಶಿಕ್ಷೆ, ನಾಲ್ಕು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ದಂಡದ ಮೊತ್ತ ಕಟ್ಟಲು ವಿಫಲವಾದರೆ ಐದು ವರ್ಷಗಳ ಹೆಚ್ಚುವರಿ ಜೈಲು ಶಿಕ್ಷೆ ನೀಡಲು ಸೂಚಿಸಲಾಗಿದೆ.

ವಿವರ

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಹಾಗೂ ತಂದೆ ವಾಸವಿದ್ದರು. ಪತ್ನಿ ಮನೆ ಬಿಟ್ಟು ಹೋಗಿದ್ದಳು. ಪತ್ನಿ ಇಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ಕ್ರೂರಿ ತಂದೆ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಇಷ್ಟೇ ಅಲ್ಲದೆ ಮಗಳ ಖಾಸಗಿ ಅಂಗಕ್ಕೆ ರಾಡ್ ತುರುಕುತ್ತಿದ್ದ. ಮಗಳು ಒಂದು ಬಾರಿ ತಪ್ಪಿಸಿಕೊಂಡು ಹೋಗಿದ್ದು, ಶಾಲೆಯಲ್ಲಿ ಶಿಕ್ಷಕರ ಬಳಿ ಇದನ್ನೆಲ್ಲಾ ಹೇಳಿಕೊಂಡಿದ್ದಾಳೆ ಎನ್ನಲಾಗಿದೆ. ಶಿಕ್ಷಕರು ಚೈಲ್ಡ್ ಲೈನ್ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, 2020ರಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!