ಅಫ್ಘಾನಿಸ್ತಾನ ವಿರುದ್ಧ ಮೊದಲ ಟಿ20 ಪಂದ್ಯ: ಟೀಮ್ ಇಂಡಿಯಾಕ್ಕೆ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಅತಿಥೇಯ ಭಾರತ 6 ವಿಕೆಟ್​ಗಳ ಸುಲಭ ಜಯ ಸಾಧಿಸಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು.
ತಂಡದ ಪರ ಮೊಹಮ್ಮದ್ ನಬಿ 42 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

.ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕ ಆಘಾತದ ಹೊರತಾಗಿಯೂ ದುಬೆ ಅವರ ಅರ್ಧಶತಕ ಹಾಗೂ ಜಿತೇಶ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ಆಧಾರದ ಮೇಲೆ 18 ಓವರ್​ಗಳಲ್ಲಿ ಗೆಲುವಿನ ದಡ ಸೇರಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!