ಮರಳಿ ಗೂಡು ಸೇರಿದ ಗಂಭೀರ್: ಲಖನೌ ತೊರೆದ ಕೆಕೆಆರ್ ತಂಡದ ಮೆಂಟರ್‌ ಆಗಿ ನೇಮಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ , ಹಾಲಿ ಬಿಜೆಪಿ ಸಂಸದ ಗೌತಮ್ ಗಂಭೀರ್, ಮುಂಬರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಮೆಂಟರ್‌ ಆಗಿ ನೇಮಕವಾಗಿದ್ದಾರೆ.

ಕಳೆದೆರಡು ಐಪಿಎಲ್ ಆವೃತ್ತಿಯಲ್ಲಿ ಲಖನೌ ಸೂಪರ್‌ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗಂಭೀರ್, ಇದೀಗ ಮರಳಿ ಗೂಡು ಸೇರಿದ್ದಾರೆ.
ಈ ವಿಚಾರವನ್ನು ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಸಿಇಒ ವೆಂಕಿ ಮೈಸೂರ್ ಖಚಿತಪಡಿಸಿದ್ದಾರೆ. ಈ ನಿರ್ಧಾವವನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕರಾದ ಶಾರುಕ್ ಖಾನ್ ಅವರು ಮುಕ್ತ ಹೃದಯದಿಂದ ಸ್ವಾಗತಿಸಿದ್ದಾರೆ. ಇನ್ನು ಗೌತಮ್ ಗಂಭೀರ್ ಕೂಡಾ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.

ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಕಳೆದೆರಡು ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಅದ್ಭುತ ಪ್ರದರ್ಶನ ತೋರಿತ್ತಾದರೂ ಕಪ್ ಗೆಲ್ಲಲು ಯಶಸ್ವಿಯಾಗಿಲ್ಲ. 2022ರ ಐಪಿಎಲ್ ಟೂರ್ನಿಯಲ್ಲಿ ಲಖನೌ ತಂಡವು ಫೈನಲ್‌ಗೇರಿದ ಸಾಧನೆ ಮಾಡಿತ್ತು.

ಕೋಲ್ಕತಾ ನೈಟ್ ರೈಡರ್ಸ್‌ ತಂಡವು 2012 ಹಾಗೂ 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಕೆಕೆಆರ್ ತಂಡದಲ್ಲಿ ಹಲವಾರು ಪ್ರತಿಭಾನ್ವಿತ ಆಟಗಾರರಿದ್ದರೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಕೆಕೆಆರ್ ಫ್ರಾಂಚೈಸಿಯು 2024ರ ಐಪಿಎಲ್ ಟೂರ್ನಿಗೂ ಮುನ್ನ ಚಾಂಪಿಯನ್ ಆಟಗಾರನನ್ನು ಕರೆತಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!