ಹೊಸದಿಗಂತ ಡಿಜಿಟಲ್ ಡೆಸ್ಕ್:
ತರಕಾರಿ ಕೊಂಡೊಯ್ತಿದ್ದ ಲಾರಿ ಪಲ್ಟಿಯಾಗಿ 9 ಜನರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ನಡೆದಿದೆ.

15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು.
ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
