ಹೊಸದಿಗಂತ ವರದಿ, ಕಾರವಾರ:
ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣೆಕಲೆ ಕೌಶಲ್ಯಗಳ ತರಬೇತಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕರ್ನಾಟಕ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅವರು ಉದ್ಘಾಟಿಸಿದರು.
ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳು, ಉತ್ತರ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಈ ತರಬೇತಿ ನೀಡಲಾಗುತ್ತದೆ.
ಬಳಿಕ ವೇದಿಕೆಯಲ್ಲಿ ಓಬವ್ವ ಆತ್ಮ ರಕ್ಷಣೆಕಲೆ ಎಂಬ ಲಾಂಚನ ಬಿಡುಗಡೆ ಮಾಡಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಕಾರವಾರ ನಗರಸಭೆಯ ಅಧ್ಯಕ್ಷ ನಿತಿನ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ ಮತ್ತಿತರರು ಇದ್ದರು.