ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳದಲ್ಲಿ ನೂರಾರು ಶವ ಹೂತುಹಾಕಿದೆ ಎನ್ನಲಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಬಗ್ಗೆ ದೂರು ನೀಡಿದ ‘ ಮಾಸ್ಕ್ ಮ್ಯಾನ್’ ನನ್ನು ಎಸ್ ಐಟಿ ಬಂಧಿಸಿದೆ.
ಹಲವು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಈತನ ದೂರಿನ ಆಧಾರದಲ್ಲಿ ತನಿಖೆಗಾಗಿ ಎಸ್ ಐಟಿ ರಚನೆ ಮಾಡಲಾಗಿತ್ತು. ಆತ ಹೇಳಿದ ಸ್ಥಳಗಳಲ್ಲಿ ಸಮಾಧಿ ಶೋಧ ನಡೆಸಿದ್ದರೂ ಹೆಚ್ಚಿನ ಕುರುಹುಗಳು ಲಭ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾನೆ ಎಂಬ ಆರೋಪದಡಿ ಆತನನ್ನು ಬಂಧಿಸಲಾಗಿದೆ.