ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರಾವಳಿಯಲ್ಲಿ ಭಾರೀ ಕುತೂಹಲ ಮೂಡಿಸಿ.ದ ಮಂಗಳೂರು ಉತ್ತರ ಕಾಂಗ್ರೆಸ್ ಟಿಕೆಟ್ ಕೊನೆಗೂ ಇನಾಯತ್ ಆಲಿಗೆ ಸಿಕ್ಕಿದ್ದು,ಇದರ ಬೆನ್ನಲ್ಲೇ ಪ್ರಬಲ ಆಕಾಂಕ್ಷಿಯಾಗಿದ್ದ ಮೊಯಿದ್ದಿನ್ ಬಾವಾ ಸಿಡಿದೆದಿದ್ದಾರೆ .
ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾಂಗ್ರೆಸ್, ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಬಾವಾ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಟಿಕೆಟ್ ಮಾರಾಟ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಪಕ್ಷದ ಸರ್ವೆಯಲ್ಲಿ ಶೇ. 78 ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇ. ಮತ ಸಿಕ್ಕಿದ್ದರೂ, ಆದ್ರೂ ಡಿಕೆಶಿಯ ಪಾಲುದಾರ ಎಂಬ ನೆಪದಲ್ಲಿ ಟಿಕೆಟ್ ಮಾರಿದ್ದಾರೆ. ನನ್ನ ಟಿಕೆಟ್ ತಪ್ಪಿಸಿದ್ದು ಡಿಕೆ ಶಿವಕುಮಾರ್ ಅವರೇ, ಖಚಿತವಾಗಿ ಹೇಳುತ್ತೇನೆ. ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಸೋಲಿಸಲು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
ಇನಾಯತ್ ಅಲಿ ಯಾರೆಂದೇ ಕ್ಷೇತ್ರದಲ್ಲಿ ಜನರಿಗೆ ಗೊತ್ತಿಲ್ಲ, ಕಾಂಗ್ರೆಸ್ ಕಾರ್ಯಕರ್ತರಿಗೂ ಗೊತ್ತಿಲ್ಲ ಎಂದು ಗುಡುಗಿದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜಿನಾಮೆ ನೀಡಿ ಜೆಡಿಎಸ್ ಸೇರುತ್ತೇನೆ, ಮಂಗಳೂರು ಉತ್ತರ ಕ್ಷೇತ್ರದಲ್ಲಿ ನಾನು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಇನಾಯತ್ ಗೆದ್ದರೆ ನನ್ನ ತಲೆ ಕಡಿದು ಕೊಡಲು ಸಿದ್ಧನಿದ್ದೇನೆ ಎಂದು ಕಿಡಿಕಾರಿದರು.
