ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ ಎಂದು ಕುಟುಂಬಸ್ಥರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೋಣನಕುಂಟೆಯಲ್ ಕ್ರಾಸ್ ಬಳಿರುವ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವನ್ನಪ್ಪಿದ್ದು , ಇದಕ್ಕೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆಸ್ಪತ್ರೆಗೆ ಕನಕಪುರ ಮೂಲದ ತನುಶ್ರೀ(23) ಎಂಬುವರನ್ನು ಹೆರಿಗೆಗಾಗಿ ನಿನ್ನೆ ರಾತ್ರಿ ದಾಖಲಿಸಲಾಗಿತ್ತು. ನಾರ್ಮಲ್ ಕಷ್ಟವಿದೆ. ಸಿಜೇರಿಯನ್ ಮಾಡಬೇಕು ಎಂಬುದಾಗಿ ವೈದ್ಯರು ತಿಳಿಸಿದಾಗ ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ಕಳೆದ ಮಧ್ಯರಾತ್ರಿ ಗರ್ಭಿಣಿಗೆ ಸಿಜೇರಿಯನ್ ಮಾಡಿ ಮಗುವನ್ನು ತೆಗೆಯುವ ವೇಳೆಯಲ್ಲಿ ವೈದ್ಯರ ಎಡವಟ್ಟಿಗೆ ಬಾಣಂತಿ ಸಾವನ್ನಪ್ಪಿದ್ದಾರೆ. ಆದರೇ ತಾಯಿ ಸಾವನ್ನಪ್ಪಿದ್ದಾರೆ. ಈ ವಿಷಯವನ್ನು ತಿಳಿಸದಂತ ಆಸ್ಪತ್ರೆಯ ವೈದ್ಯರು, ಮೊದಲು ಬಿಲ್ ಕಟ್ಟುವಂತೆ ಕುಟುಂಬಸ್ಥರಿಗೆ ಸೂಚಿಸಿದ್ದಾರೆ. ಬಿಲ್ ಸಂಪೂರ್ಣ ಕಟ್ಟಿದ ಬಳಿಕ ತಾಯಿ ಸಾವನ್ನಪ್ಪಿರುವ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವಿನ ವಿಚಾರ ತಿಳಿದಂತ ಕುಟುಂಬಸ್ಥರು ಆಸ್ಪತ್ರೆಯ ಬಳಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿ,ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕೋಣನಕುಂಟೆ ಠಾಣೆಯ ಪೊಲೀಸರು ಕುಟುಂಬಸ್ಥರನ್ನು ಮನವೊಲಿಸಿದರು. ಅಲ್ಲದೇ ಬಾಣಂತಿ ಸಾವಿನ ಬಗ್ಗೆ ಖಚಿತ ಮಾಹಿತಿ ತಿಳಿಯಲು ಶವ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಮೃತ ದೇಹವನ್ನು ಸ್ಥಳಾಂತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!