ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಮೈಸೂರಿನಲ್ಲಿ ದಸರಾಗೆ ಸಿದ್ಧತೆಗಳು ನಡೀತಿವೆ. ಈ ನುಡವೆ ರಾಜ್ಯ ರಾಜಕೀಯದಲ್ಲಿ ದಸರಾ ಉದ್ಘಾಟಕರ ಆಯ್ಕೆ ಭಾರೀ ಚರ್ಚೆಗೆ ನಾಂದಿ ಹಾಡಿದೆ.
ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಪರ-ವಿರೋಧ ಚರ್ಚೆಗಳ ನಡುವೆ ಇದಕ್ಕೆ ಸ್ವತಃ ಬಾನು ಮುಷ್ತಾಕ್ ಪ್ರತಿಕ್ರಿಯಿಸಿದ್ದಾರೆ.
ದಸರಾ ಉದ್ಘಾಟನೆ ಗೆ ತಮ್ಮ ಹೆಸರು ಆಯ್ಕೆ ನಂತರ ಅಪಸ್ವರದ ಬಗ್ಗೆ ಹಾಸನದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಬಾನು ಮುಷ್ತಾಕ್, ಈ ಬಗ್ಗೆ ನಾನು ಏನು ಮಾತನಾಡಲ್ಲ. ಕೋಟ್ಯಾಂತರ ಕನ್ನಡಿಗರು ಎಷ್ಟೊಂದು ಪ್ರೀತಿ ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು. ಅದರ ಅಗತ್ಯ ಇಲ್ಲ ಎನ್ನಿಸುತ್ತೆ. ವಿರೋದ ಪಕ್ಷ ಆಡಳಿತ ಪಕ್ಷ ಇರಬೇಕು. ರಾಜಕೀಯ ಮಾಡಬೇಕು. ಆದರೆ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕು ಯಾವುದರಲ್ಲಿ ಮಾಡಬಾರದು ಎನ್ನುವ ಪ್ರಜ್ಞೆ ಸಕ್ರಿಯ ರಾಜಕಾರಣಿ ಗಳಿಗೆ ಇರಬೇಕಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.