ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳು ಪ್ರತಿಭಟನೆ ಮಾಡ್ತಿವೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ಹೆಸರಿಗೆ ಮಸಿ ಬಳಿಯಲು ವಿರೋಧ ಪಕ್ಷಗಳು ಮುಡಾ ಹಗರಣದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ವಾಗ್ದಾಳಿ ನಡೆಸಿದರು.

ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಸದನದ ಬಾವಿಗಿಳಿದು ಮುಡಾ ಹಗರಣದ ಬಗ್ಗೆ ಚರ್ಚೆಗೆ ಒತ್ತಾಯಿಸಿದವು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯದ್ದೇ ಸಮಸ್ಯೆ. ಮುಡಾ ವಿಚಾರ ಬಂದಾಗ ಪ್ರತಿಭಟಿಸುತ್ತಾರೆ. ನಿಯಮಾನುಸಾರ ನಿವೇಶನ ಪಡೆಯಲಾಗಿದೆ. ಎಲ್ಲವೂ ಕಾನೂನಿನ ಪ್ರಕಾರವೇ ನಡೆದಿದೆ. ಮುಡಾ ನಿವೇಶನ ಪಡೆದಾಗ ಬಿಜೆಪಿ ಅಧಿಕಾರದಲ್ಲಿತ್ತು. ಪ್ರತಿಪಕ್ಷಗಳನ್ನು ಟೀಕಿಸಿ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!