ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರದಲ್ಲಿ ನಡೆದ ನರಮೇಧಕ್ಕೆ ಭಾರತ ಪ್ರತೀಕಾರದ ದಾಳಿ ನಡೆಸಿದೆ. ʻಆಪರೇಷನ್ ಸಿಂಧೂರʼ ಮೂಲಕ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಉಗ್ರ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ.
ಇಷ್ಟಾದ್ರೂ ಕುತಂತ್ರ ಬುದ್ದಿ ಬಿಡದ ಪಾಕ್ ಭಾರತದ ವಿರುದ್ಧ ಪ್ರತಿದಾಳಿಗೆ ಸಂಚು ರೂಪಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.
ಇಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆದ ಪ್ರಧಾನಿ ಶೆಹಬಾಜ್ ಶರೀಫ್, ಭಾರತದ ಪ್ರತೀಕಾರದ ದಾಳಿಯನ್ನ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಭಾರತದ ವಿರುದ್ಧ ದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ್ದಾರೆ ಎಂದು ವರದಿ ಮಾಡಲಾಗಿದೆ.