ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಅಪಘಾತಗಳಲ್ಲಿ ಸಾವುಗಳ ಸಂಖ್ಯೆ ಕಡಿಮೆ ಮಾಡಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಆದರೂ ಜನರಿಗೆ ಕಾನೂನಿನ ಬಗ್ಗೆ ಗೌರವ ಹಾಗೂ ಭಯವಿಲ್ಲದ ಕಾರಣ ಸಾವುನೋವುಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ರಸ್ತೆ ಎಂಜಿನಿಯರಿಂಗ್, ಆಟೋಮೊಬೈಲ್ ಎಂಜಿನಿಯರಿಂಗ್, ಕಾನೂನು ಜಾರಿ ಮತ್ತು ಜನರಿಗೆ ರಸ್ತೆ ಸುರಕ್ಷತೆ ಬಗ್ಗೆ ಶಿಕ್ಷಣ ನೀಡುವುದು ಮುಖ್ಯ ಎಂದು ಒತ್ತಿ ಹೇಳಿದ್ದಾರೆ.
ನಮ್ಮ ಸಮಾಜದ ದೊಡ್ಡ ಸಮಸ್ಯೆ ಎಂದರೆ ರೆಡ್ ಸಿಗ್ನಲ್ನಲ್ಲಿ ನಿಲ್ಲುವುದಿಲ್ಲ. ಅಲ್ಲದೇ ನಮ್ಮ ಜನ ಹೆಲ್ಮೆಟ್ ಹಾಕುವುದಿಲ್ಲ. ಹೆಲ್ಮೆಟ್ ಹಾಕದ ಕಾರಣಕ್ಕೆ 30,000 ಜನ ಸಾಯುತ್ತಾರೆ ಎಂದು ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.