ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ, ಪೊಲೀಸರಿಂದ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ದಾಳಿ ನಡೆಸಿದ  ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.

ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಯನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ:

ಎಸ್ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್ : 9596777669 ಇ- ಮೇಲ್ : dpoanantnag-jk@nic.in ಮಾಹಿತಿ ನೀಡಬಹುದು. ಕಾಶ್ಮೀರ ಕಣಿವೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಅಡಚಣೆ ಉಂಟಾಗದಂತೆ ತಡೆಯಲು ಕಾನೂನು ಜಾರಿ ಸಂಸ್ಥೆಗಳು ಪ್ರಯತ್ನಗಳನ್ನು ತೀವ್ರಗೊಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!