ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಹತ್ಯೆಗೊಳಗಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಹುಟ್ಟೂರಿಗೆ ಕೊಂಡೊಯ್ಯಲಾಗುತ್ತಿದೆ.
ದಾರಿಯುದ್ದಕ್ಕೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ಆಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ.

